ವಕೀಲರ ಸಂಘಗಳಲ್ಲಿ ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿ: ಸಿಎಂ

Chitradurga
ವಕೀಲರ ಸಂಘಗಳಲ್ಲಿ ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿ: ಸಿಎಂ
****************
ಸರಸ್ವತಿ ಕಾನೂನು ಮಹಾವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ರೂ.2 ಕೋಟಿ ಅನುದಾನ
ಕೋಟೆನಾಡಿನಲ್ಲಿ ಕಾನೂನು ಸೌಧ ಅನಾವರಣ
ಮಾಲತೇಶ್ ಅರಸ್
ಚಿತ್ರದುರ್ಗ: ಸರ್ವೋಚ್ಚ, ಉಚ್ಛ ಹಾಗೂ ಕೆಳ ಹಂತದ ನ್ಯಾಯಾಲಯ ಹಾಗೂ ವಕೀಲರ ಸಂಘಗಳಲ್ಲಿ ನಾಡಿನ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಯಾಗಲಿ. ಕಾನೂನಿನ ನೆರವಿಂದ ಈ ಸಮಸ್ಯೆಗಳಿಗೆ ಪರಿಹಾರವನ್ನು ಹೇಗೆ ಒದಗಿಸಬಹುದು ಎಂಬುದರ ಚಿಂತನೆ ನಡೆಯಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬುಧವಾರ ಚಿತ್ರದುರ್ಗ ನಗರದ ಸರಸ್ವತಿ ಕಾನೂನು ಮಹಾವಿದ್ಯಾಲಯದ ಸುವರ್ಣ ಸಮಾರಂಭ ಹಾಗೂ ಕಾನೂನು ಸೌಧ ಉದ್ಘಾಟಿಸಿ ಮಾತನಾಡಿದರು.
ಶಾಸಕಾಂಗ ಹಾಗೂ ನ್ಯಾಯಾಂಗ ಒಂದನ್ನೊಂದು ಅವಲಂಬಿಸಿವೆ. ಎರಡೂ ಜೊತೆ ಜೊತೆಯಾಗಿ ಸಾಗಬೇಕು. ಶಾಸಕಾಂಗದಿಂದ ಕಾನೂನು ರೂಪಿಸುವಾಗ ಹತ್ತು ಹಲವು ವಿಚಾರಗಳನ್ನು ಗಮನಿಸಬೇಕಾಗುತ್ತದೆ. ರೂಪಿಸುವ ಕಾನೂನು ಸಂವಿಧಾನ ಬದ್ದಬಾಗಿರಬೇಕು, ಸಮಾನತೆ ಸ್ವರೂಪ ಹೊಂದಿರಬೇಕು, ಕಾನೂನುಗಳು ಗೊಂದಲ ಮಯವಾಗಿರಬಾರದು. ಸ್ಪಷ್ಟ ಉದ್ದೇಶದಿಂದ ಕಾನೂನು ರೂಪಿಸಬೇಕು ಎಂದರು.
ದೇಶದಲ್ಲಿ ವ್ಯಾಜ್ಯಗಳ ಸಂಖ್ಯೆ ಕಡಿಮೆಯಾಗಬೇಕು. ವಕೀಲರು ಮಾನವೀಯತೆ ಮರೆಯಬಾರದು. ಪ್ರಾಕೃತಿಕ ನ್ಯಾಯ ಹಾಗೂ ಮಾನವ ರಚಿತ ಕಾನೂನುಗಳು ಭಿನ್ನವಾಗಿವೆ. ಪ್ರಾಕೃತಿಕ ನ್ಯಾಯ
ಸತ್ಯ, ಧರ್ಮ, ಪರೋಪಕಾರದಿಂದ ಲಭಿಸುವ ಪುಣ್ಯ ಪ್ರಾಪ್ತಿಯ ಬಗ್ಗೆ ತಿಳಿಸುತ್ತದೆ. ಆದರೆ ಮಾನವ ನಿರ್ಮಿತ ಕಾನೂನು ಶಿಕ್ಷಾರ್ಹ ನೀತಿ ಹೊಂದಿದೆ. ಕಾನೂನು ಮೀರಿದರೆ ದಂಡ ವಿಧಿಸಲಾಗುತ್ತದೆ. ಭಾರತಕ್ಕೆ ಭವ್ಯ ಚರಿತ್ರೆ ಇದೆ. ಆದರೆ ಇಂದು ಉತ್ತಮ ಚಾರಿತ್ಯ ಹೊಂದಿರುವ ಜನರು ಬೇಕಾಗಿದೆ. ಭಾರತದಲ್ಲಿ ನೀತಿಗಳ ಬೋದಿಸುವ ಆಚಾರ್ಯರಿದ್ದಾರೆ. ಆದರೆ ನೀತಿಗಳ ಆಚರಣೆಯಾಗಬೇಕು ಎಂದರು.
ರಾಜಕಾರಣಿಗಳು ಪ್ರತಿನಿತ್ಯ ರಾಜಕಾರಣ ಮಾಡಬಾರದು. ಅಧಿಕಾರ ಲಭಿಸುವ 60 ತಿಂಗಳಲ್ಲಿ 59 ತಿಂಗಳ ಅಭಿವೃದ್ಧಿ ಮಾಡಿ 1 ತಿಂಗಳು ರಾಜಕಾರಣ ಮಾಡಬೇಕು. ಜವಾಬ್ದಾರಿಯುತ ರಾಜಕೀಯ ಪಕ್ಷಗಳ ಇದನ್ನು ಅರಿಯಬೇಕು. ರಾಜಕಾರಣಿ ಮುಂದಿನ ಚುನಾವಣೆ ನೋಡುತ್ತಾನೆ. ಮುತ್ಸದ್ಧಿ ದೃಷ್ಟಿ ಮುಂದಿನ ಜನಾಂಗದ ಮೇಲೆ ಇರುತ್ತದೆ. ಮುಂದಿನ ಜನಾಂಗಕ್ಕೆ ಮೌಲ್ಯಗಳನ್ನು ತಿಳಿಸಬೇಕು ಎಂದರು.
ಸರಸ್ವತಿ ವಿದ್ಯಾಸ್ಥಂಸ್ಥೆ ಮಧ್ಯ ಕರ್ನಾಟಕದಲ್ಲಿ ಜನರಿಗೆ ಕಾನೂನು ನೆರವು ಲಭಿಸುವ ನಿಟ್ಟಿನಲ್ಲಿ ಉತ್ತಮ ವಕೀಲರನ್ನು ರೂಪಿಸಿದೆ. ಸ್ವಾತಂತ್ರ್ಯ ಹಾಗೂ ರಾಜ್ಯ ಏಕೀಕರಣದಲ್ಲಿ ವಕೀಲರ ಪಾತ್ರ ದೊಡ್ಡದಿದೆ. ಬ್ಯಾರಿಷ್ಟರ್ ಪದವಿ ಪಡೆದ ಮಹನೀಯರು ಸ್ವಾತಂತ್ರ್ಯ ಸಮಯದಲ್ಲಿ ಕಾನೂನು ರೂಪಿಸುವ ಸ್ಥಾನದಲ್ಲಿದ್ದರು. ಕಾಲಕ್ರಮೇಣ ಈ ಸಂಖ್ಯೆ ಇಳಿಮುಖವಾಗಿದೆ. ಇಂದು ಶೇ.25ಕ್ಕಿಂತ ಕಡಿಮೆ ವಕೀಲರು ರಾಜಕಾರಣದಲ್ಲಿದ್ದಾರೆ ಎಂದರು.
ಸರಸ್ವತಿ ಕಾನೂನು ಮಹಾವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ರೂ.2 ಕೋಟಿ ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು. ಕಾನೂನು ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಹಾಸ್ಟೆಲ್ ಸ್ಥಾಪಿನೆ.‌ಕಾನೂನು ಕಾಲೇಜುಗಳ ಶೈಕ್ಷಣಿಕ, ಆರ್ಥಿಕ, ಆಡಳಿತಾತ್ಮಕ ವಿಚಾರಗಳನ್ನು ನೋಡಿಕೊಳ್ಳಲು ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸುವ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧರಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವ ಭೈರತಿ ಬಸವಾರಾಜ, ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಹಾಗೂ ಶಾಸಕ ಎ.ಚಂದ್ರಪ್ಪ, ಶಾಸಕ ಟಿ.ರಘುಮೂರ್ತಿ,ವಿಧಾನ ಪರಿಷತ್ ಶಾಸಕ ರವಿಕುಮಾರ್, ಕೆ.ಎಸ್.ನವೀನ್, ನಗರ ಸಭೆ ಅಧ್ಯಕ್ಷೆ ಬಿ.ತಿಪ್ಪಮ್ಮ , ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್, ಹುಬ್ಬಳ್ಳಿ ಕಾನೂನು ವಿ.ವಿ.ಉಪಕುಲಪತಿ ಡಾ.ಸಿ.ಬಸವರಾಜು, ಸರಸ್ವತಿ ಕಾನೂನು ಕಾಲೇಜು ಅಧ್ಯಕ್ಷರು ಮತ್ತು ಮಾಜಿ ರಾಜ್ಯಸಭಾ ಸದಸ್ಯರಾದ ಹೆಚ್.ಹನುಮಂತಪ್ಪ, ಜಿ.ಪಂ.ಸಿಇಓ ಎಂ.ಎಸ್.ದಿವಾಕರ್,  ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್, ಕಾಲೇಜಿನ ಪ್ರಾಚಾರ್ಯರಾದ ಡಾ.ಸುಧಾದೇವಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಎರಡು ಕೋಟಿ ಕೊಡಿ..
ಮಧ್ಯ ಕರ್ನಾಟಕದಲ್ಲಿ ಇದು ಪ್ರತಿಷ್ಠಿತ ಕಾಲೇಜಾಗಿದ್ದು
ಸರಸ್ವತಿ ಕಾನೂನು ಮಹಾವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ರೂ.2 ಕೋಟಿ ಅನುದಾನ ಒದಗಿಸಲು ಮನವಿ ಮತ್ತು  ಕಾನೂನು ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಹಾಸ್ಟೆಲ್ ಸ್ಥಾಪಿನೆಮಾಡಿ. ಕಾನೂನು ಕಾಲೇಜುಗಳ ಶೈಕ್ಷಣಿಕ, ಆರ್ಥಿಕ, ಆಡಳಿತಾತ್ಮಕ ವಿಚಾರಗಳನ್ನು ನೋಡಿಕೊಳ್ಳಲು ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸಬೇಕೆಂದು ಸರಸ್ವತಿ ಕಾನೂನು ಕಾಲೇಜು ಅಧ್ಯಕ್ಷರಾದ ಹೆಚ್.ಹನುಮಂತಪ್ಪ ಮ‌ನವಿ ಮಾಡಿದರು.
ಮಾಲತೇಶ್ ಅರಸ್. ನ್ಯೂಸ್ ಎಡಿಟರ್. ಚಿತ್ರದುರ್ಗ
ಚಿತ್ರದುರ್ಗ ನಗರದ ಸರಸ್ವತಿ ಕಾನೂನು ಮಹಾವಿದ್ಯಾಲಯದ ಸುವರ್ಣ ಸಮಾರಂಭ ಹಾಗೂ ಕಾನೂನು ಸೌಧ ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು ಮತ್ತು ಸಮಾರಂಭದಲ್ಲಿ ಮಾತನಾಡಿದರು

Leave a Reply

Your email address will not be published. Required fields are marked *