ಚಿತ್ರದುರ್ಗ: (ಸುದ್ದಿವಾಣಿ): ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಗ್ರಾಮದಲ್ಲಿ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ 47 ನೇ ಹುಟ್ಟುಹಬ್ಬವನ್ನು ತುಂಬಾ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕೇಕ್ ಕತ್ತರಿಸಿ, ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡುವುದರ ಮೂಲಕ ಹರ್ತಿಕೋಟೆಯ ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗ ಮತ್ತು ಗ್ರಾಮಸ್ಥರಿಂದ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯಿತು.