ವರದಿ: ಮಾಲತೇಶ್ ಅರಸ್
ಚಿತ್ರದುರ್ಗ: ಇಡೀ ಭಾರತವನ್ನು ಒಗ್ಗೂಡಿಸಲು ರಾಹುಲ್‍ಗಾಂಧಿ ಭಾರತ್ ಜೋಡೋ ಪಾದಯಾತ್ರೆ ಕೈಗೊಂಡಿದ್ದಾರೆ. ಇದು ದೇಶಕ್ಕೆ ರಾಜ್ಯಕ್ಕೆ ಮತ್ತು ಜಿಲ್ಲೆಗೂ ವರದಾನವಾಗಿದ್ದು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಆರಕ್ಕೆ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಭವಿಷ್ಯ ನುಡಿದರು.
ಮದಕರಿಪುರದಿಂದ ಸೋಮವಾರ ಆರಂಭಗೊಂಡ ಭಾರತ್ ಜೋಡೋ ಸಂವಿಧಾನ ಬಚಾವ್ ಪಾದಯಾತ್ರೆಯಲ್ಲಿ ಭಾಗವಹಿಸಿದ ಡಿ.ಕೆ.ಶಿವಕುಮಾರ್ ಕನಕ ವೃತ್ತದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಹಿಂದುತ್ವದಹೆಸರಿನಲ್ಲಿರಾಜಕಾರಣಮಾಡುತ್ತಿರುವಕೋಮುವಾದಿಬಿಜೆಪಿ. ಈಗಒಟ್ಕಳ್ಳತನಕ್ಕೆಕೈಹಾಕಿದೆ. ಮುಸಲ್ಮಾನರ ಮತಗಳನ್ನುಮತಪಟ್ಟಿಯಿಂದಡಿಲಿಟ್ಮಾಡಿಸುವಕೆಲಸಮಾಡುತ್ತಿರುವುದರವಿರುದ್ದಕಾರ್ಯಕರ್ತರು, ಮುಖಂಡರುಗಳು ಎಚ್ಚೆತ್ತುಕೊಂಡುಪ್ರತಿಮನೆಮನೆಗೆಹೋಗಿಮತದಾನದಪಟ್ಟಿಯನ್ನುಸರಿಪಡಿಸುವಕೆಲಸಮಾಡಬೇಕೆಂದುಕರ್ನಾಟಕಪ್ರದೇಶಕಾಂಗ್ರೆಸ್ಸಮಿತಿಅಧ್ಯಕ್ಷಡಿ.ಕೆ.ಶಿವಕುಮಾರ್ ವಿನಂತಿಸಿದರು.
ಎ.ಐ.ಸಿ.ಸಿ. ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಾಜೇಶ್ ಮಾತನಾಡಿ ಸಂವಿಧಾನವನ್ನು ಕತಂ ಮಾಡಲು ಹೊರಟಿರುವ ಬಿಜೆಪಿ.ವಿರುದ್ದ ದೇಶದ ಜನತೆಯನ್ನು ಜಾಗೃತಿಗೊಳಿಸಿ ಸಂವಿಧಾನವನ್ನು ರಕ್ಷಿಸಲು ರಾಹುಲ್‍ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್‍ಜೋಡೋ ಪಾದಯಾತ್ರೆ ಹೊರಟಿದ್ದಾರೆ. ಕಾರ್ಯಕರ್ತರನ್ನು ಲೀಡರ್ ಮಾಡಬೇಕೆಂಬುದು ರಾಹುಲ್ ಉದ್ದೇಶ. ಎಲ್ಲಾ ಜಾತಿ ಧರ್ಮದವರಿಗೂ ಸಂವಿಧಾನದಲ್ಲಿ ಸಮಾನತೆ ನೀಡಲಾಗಿದೆ. ಹಾಗಾಗಿ ಪ್ರತಿಯೊಬ್ಬರು ಸಂವಿಧಾನವನ್ನು ರಕ್ಷಣೆ ಮಾಡಬೇಕಿದೆ ಎಂದು ಹೇಳಿದರು.
ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ರಾಜ್ಯ ಕಾರ್ಯದರ್ಶಿ ಡಾ. ಹನುಮಲಿ ಷಣ್ಮುಖಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮಾಜಿ ಶಾಸಕರುಗಳಾದ ಎ.ವಿ.ಉಮಾಪತಿ, ಸೋಮಶೇಖರ್, ತಿಪ್ಪೇಸ್ವಾಮಿ, ಡಿ.ಸುಧಾಕರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಬಿ.ಟಿ.ಜಗದೀಶ್, ಅಸಂಘಟಿತರ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾಧ್ಯಕ್ಷ ಮೋಹನ್ ಪೂಜಾರಿ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಸವಿತಾ ರಘು, ಜಿಲ್ಲಾ ಮಾಜಿ ಕಾರ್ಯಾಧ್ಯಕ್ಷ ಶಿವುಯಾದವ್,
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿಗೌಡ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಣ್ಣ, ಡಾ. ಸುಜಾತ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು.

ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅಂಬೇಡ್ಕರ್ ಪ್ರತಿಮೆ ಗೆ ಮಾಲಾರ್ಪಣೆ ಮಾಡಿದರು..