ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ, RSS ತಂಟೆಗೆ ಬರಬೇಡಿ’

Bangalore

ಕೈ ಟಗರು ವರ್ಸಸ್ ಕಮಲ ಪಟ್ಲಿ

ಬೆಂಗಳೂರು:(ಸುದ್ದಿವಾಣಿ) ಸಿದ್ದರಾಮಯ್ಯ ಅವರೇ, ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್‌ಎಸ್‌ಎಸ್‌ ತಂಟೆಗೆ ಬರಬೇಡಿ’ ಎಂದು ಬಿಜೆಪಿ ಶಾಸಕ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ… ಲಂಕೆಯೇ ಸುಟ್ಟು ಹೋಯಿತು. ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ, ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ ಒಂದೇ ಬಾಕಿ ಇದೆ. ಆ ಕೆಲಸ ನಿಮಗಿಂತ ಚೆನ್ನಾಗಿ ಇನ್ಯಾರು ಮಾಡಲು ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ತಂಟೆಗೆ ಬಂದರೆ ಸರ್ವನಾಶವಾಗುತ್ತೀರಾ ಎಂದಿದ್ದಾರೆ.

 

ತಿಪಟೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಮನೆ ಎದುರು ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನು ಬಂಧಿಸದಿದ್ದರೆ ರಾಜ್ಯದಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುತ್ತೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.

 

Leave a Reply

Your email address will not be published. Required fields are marked *